-->
 ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಒತ್ತಾಯಿಸಿ ಸಿಐಟಿಯು ಪ್ರತಿಭಟನೆ


ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆ ಹಾಗೂ ಕನಿಷ್ಠ ಕೂಲಿಯನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿ ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಇಂದು ಮಣಿಪಾಲದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಮಣಿಪಾಲದ ಟೈಗರ್ ಸರ್ಕಲ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಎಸಿ ಮೂಲಕ ರಾಜ್ಯದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಇದೇ ವೇಳೆ ಸಾವಿರಾರು ಕಾರ್ಮಿಕರಿಂದ ಸಂಗ್ರಹಿಸಲಾದ ಸಹಿಗಳ ಪ್ರತಿಯನ್ನೂ ಹಸ್ತಾಂತರಿಸಲಾಯಿತು.

ಪ್ರತಿಭಟನಾ ಸಭೆಯನ್ನುದೇಶಿಸಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದರು.

ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ವಿ, ಕೋಶಾಧಿಕಾರಿ ಕವಿರಾಜ್ ಎಸ್ ಕಾಂಚನ್ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.



Ads on article

Advertise in articles 1

advertising articles 2

Advertise under the article