ಮನೆ ಮೇಲೆ ಮರ ಬಿದ್ದು ಹಾನಿ: ವಿದ್ಯುತ್ ಕಂಬವೂ ಜಖಂ
Sunday, May 24, 2026
ಉಡುಪಿ ನಗರದ ಕಿನ್ನಿಮುಲ್ಕಿ ರಾಮಚಂದ್ರ ಲೇನ್ ಪ್ರದೇಶದಲ್ಲಿ ನಗರಸಭೆಗೆ ಸೇರಿದ ಮರವೊಂದು ಮನೆ ಮೇಲೆ ಬಿದ್ದು ಹಾನಿ ಉಂಟಾದ ಘಟನೆ ನಡೆದಿದೆ.
ಮರ ಏಕಾಏಕಿ ಉರುಳಿ ಬಿದ್ದ ಪರಿಣಾಮ ಮನೆಯ ಮೇಲ್ಛಾವಣಿಗೆ ಹಾನಿಯಾಗಿದ್ದು, ಸ್ಥಳದಲ್ಲೇ ಇದ್ದ ವಿದ್ಯುತ್ ಕಂಬವೂ ತುಂಡಾಗಿ ಬಿದ್ದಿದೆ. ಇದರಿಂದ ಕೆಲಕಾಲ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ವೇಳೆ ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ತಕ್ಷಣವೇ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಮರ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ವ್ಯತ್ಯಯ ಉಂಟಾಗಿದ್ದು, ಮೆಸ್ಕಾಂ ಸಿಬ್ಬಂದಿಗಳು ಹಾಗೂ ನಗರಸಭೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮರ ತೆರವು ಹಾಗೂ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.
ಮಳೆ ಹಾಗೂ ಗಾಳಿಯ ಹಿನ್ನೆಲೆಯಲ್ಲಿ ಹಳೆಯ ಮತ್ತು ಅಪಾಯಕಾರಿ ಮರಗಳನ್ನು ಮುಂಜಾಗ್ರತಾ ಕ್ರಮವಾಗಿ ತೆರವುಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


