ಆರೋಗ್ಯ ಸೇವೆಗೆ ಎಂಆರ್‌ಪಿಎಲ್ ನೆರವು: ಹೊಸ ಸುಸಜ್ಜಿತ ವಾಹನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ
Saturday, May 16, 2026
ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಯೋಜನೆಯಡಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಕೊಡುಗೆಯಾಗಿ ನೀಡಿರುವ ಹೊಸ ಸುಸಜ್ಜಿತ ವಾಹನಕ್ಕೆ ಚಾಲನೆ ನೀಡಲಾಯಿತು.
ಉಡುಪಿ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಹನಕ್ಕೆ ಅಧಿಕೃತ ಚಾಲನೆ ನೀಡಿದರು.
ಈ ವಾಹನವು ಜಿಲ್ಲೆಯ ಆರೋಗ್ಯ ಸೇವಾ ಕಾರ್ಯಚಟುವಟಿಕೆಗಳಿಗೆ ನೆರವಾಗಲಿದ್ದು, ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಇಲಾಖೆಯ ಹಿರಿಯ ಸಿಬ್ಬಂದಿ ಹಾಗೂ ಎಂಆರ್‌ಪಿಎಲ್ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
