ಕೊಡವೂರು ಮಹಾರುದ್ರ ಯಾಗದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಭಾಗಿ
Tuesday, May 19, 2026
ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಆಯೋಜಿಸಲಾಗಿರುವ ಮಹಾರುದ್ರಯಾಗದ 4ನೇ ದಿನದ ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯತ್ಪಾಲ್ ಆನಂದ್ ಸುವರ್ಣ ಅವರು ಭಾಗವಹಿಸಿದರು.
ಕೊಡವೂರು ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಹಾರುದ್ರ ಯಾಗ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಸೇವಾಕರ್ತ ಪ್ರಸಾದ್ ರಾಜ್ ಕಾಂಚನ್ ಅವರು ಯಶ್ ಪಾಲ್ ಸುವರ್ಣ ಅವರನ್ನು ಸ್ವಾಗತಿಸಿ, ಗೌರವಿಸಿದರು.
ಕೊಡವೂರು ದೇವಳ ಆಡಳಿತ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಸಂಚಾಲಕರಾದ ಕೃಷ್ಣಮೂರ್ತಿ ಆಚಾರ್ಯ ಮತ್ತು ತಾರಾನಾಥ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ತೋಟದಮನೆ ದಿವಾಕರ ರ ಶೆಟ್ಟಿ, ಮೊದಲಾದವರಿದ್ದರು.


