ಬನ್ನಂಜೆ ಶನಿಕ್ಷೇತ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶೇಷ ಪೂಜೆ
Saturday, May 16, 2026
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉಡುಪಿ ನಗರದ ಬನ್ನಂಜೆ ಶನಿ ಕ್ಷೇತ್ರ ದಲ್ಲಿ ವೈಶಾಖ ಅಮಾವಾಸ್ಯೆಯ ಅಂಗವಾಗಿ ನಡೆದ ಶ್ರೀ ಶನಿ ಜಯಂತಿ ಮಹೋತ್ಸವದಲ್ಲಿ ಭಾಗವಹಿಸಿದರು.
ಬಳಿಕ ಮಾತನಾಡಿದ ಸಚಿವೆ, ಭಕ್ತರ ಕಷ್ಟಗಳನ್ನು ನಿವಾರಿಸಿ ನ್ಯಾಯದ ಮಾರ್ಗದಲ್ಲಿ ನಡೆಯುವಂತೆ ಪ್ರೇರೇಪಿಸುವ ಶ್ರೀ ಶನಿದೇವರ ಆಶೀರ್ವಾದ ರಾಜ್ಯದ ಪ್ರತಿಯೊಂದು ಮನೆಗೂ ಲಭಿಸಲಿ. ನಾಡಿನಲ್ಲಿ ಸುಖ, ಶಾಂತಿ ಹಾಗೂ ಸಮೃದ್ಧಿ ಸದಾ ನೆಲೆಸಿರಲಿ ಎಂದು ಪ್ರಾರ್ಥಿಸಿದರು.

