ಮಾದಕ ದ್ರವ್ಯ ಸಾಗಾಟ ಪ್ರಕರಣ: ಆರೋಪಿಯ ಬಂಧನ
Tuesday, May 19, 2026
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಣ್ಣಗುಡ್ಡೆ ನಿವಾಸಿ ಹಮೀದ್‌ರವರ ಪುತ್ರ ಅಬ್ದುಲ್ ರೌಫ್ ಎಂಬಾತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧಿಸಲಾಯಿತು.
ಈತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧಿಸಲು ಪೊಲೀಸ್ ಅಧೀಕ್ಷಕರ ಆದೇಶದ ಮೇರೆಗೆ ಬಂಧಿಸಲಾಗಿದೆ.
ಬಂಧಿತ ಆಸಾಮಿಯ ವಿರುದ್ದ ಉಡುಪಿ ಜಿಲ್ಲೆಯ ಮಣಿಪಾಲ, ಉಡುಪಿ ನಗರ ಹಾಗೂ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ತಲಾ 1 ಪ್ರಕರಣ ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿರುತ್ತದೆ. ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ದಾಖಲಾದ 3 ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿದ್ದು, ದಾಖಲಾದ 2 ಸೇವನೆ ಪ್ರಕರಣಗಳಲ್ಲಿ ಶಿಕ್ಷೆ ಆಗಿರುತ್ತದೆ.
ಬಂಧಿತ ಆರೋಪಿಯನ್ನು ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.