-->
🔥 ಮಣಿಪಾಲದ ಪಿಜಿಯೊಂದರಲ್ಲಿ ಯುವತಿಯ ಕೊಲೆ ಯತ್ನ🔥

🔥 ಮಣಿಪಾಲದ ಪಿಜಿಯೊಂದರಲ್ಲಿ ಯುವತಿಯ ಕೊಲೆ ಯತ್ನ🔥


ಯುವತಿಯೊಬ್ಬಳ ಮೇಲೆ ಮಾರಣಾಂತಿಕ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ  ಮಣಿಪಾಲ ಠಾಣಾ ವ್ಯಾಪ್ತಿಯ ಮಣಿಪಾಲ- ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ವಾಗ್ಲೆ ಸ್ಟೋರ್ ಬಳಿಯಲ್ಲಿರುವ ಮಹಿಳಾ ಪಿಜಿಯಲ್ಲಿ ನಡೆದಿದೆ. 


ಅಂಕೋಲ ಮೂಲದ ಯೋಗಿತಾ (23) ಮಾರಣಾಂತಿಕ ಹಲ್ಲೆಗೊಳಗಾದವರು. ಮಣಿಪಾಲ- ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಶಾಂತಿನಗರ ಸಮೀಪದ ವಾಗ್ಲೆ ಸ್ಟೋರ್ ಬಳಿಯಲ್ಲಿರುವ  ಮಹಿಳಾ ಪಿಜಿಯಲ್ಲಿ ವಾಸವಾಗಿದ್ದಳು. ಮಂಗಳವಾರ ರಾತ್ರಿ ಆಕೆಗೆ ಚೂರಿ ಇರಿಯಲಾಗಿದೆ. ಗಂಭೀರ ಗಾಯಗೊಂಡಿರುವ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯುವತಿಯು ಪ್ರೀತಿ ನಿರಾಕರಿಸಿರುವುದಕ್ಕೆ ಭಗ್ನ ಪ್ರೇಮಿ ಈ ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿ ಪರಾರಿಯಾಗಿದ್ದು, ಪೊಲೀಸರು ಪತ್ತೆಗಾಗಿ ಬಲೆ ಬೀಸಿದ್ದಾರೆ. ಘಟನಾಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. 



Ads on article

Advertise in articles 1

advertising articles 2

Advertise under the article