ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಗಾಯಕಿ ಮಂಗ್ಲಿ ಭೇಟಿ
Tuesday, May 19, 2026
ಉಡುಪಿ ಶ್ರೀಕೃಷ್ಣಮಠಕ್ಕೆ ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ ಅವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಮಂಗ್ಲಿ ಅವರಿಗೆ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸಾಥ್ ನೀಡಿದರು.
ಬಳಿಕ ಮಾತನಾಡಿದ ಮಂಗ್ಲಿ ಅವರು, ನನಗೆ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ತುಂಬಾ ಸಂತೋಷವಾಯಿತು. ಉಡುಪಿ ಪರಿಸರ ತುಂಬಾ ಚನ್ನಾಗಿದೆ ಎಂದರು .