ರಾಜ್ಯದ ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ
ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಹಿಜಬ್ ನಿರ್ಬಂಧಿಸಿ 2022 ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದ ಸರ್ಕಾರ, ಹಿಜಬ್ ಧರಿಸಲು ಅವಕಾಶ ಕಲ್ಪಿಸಿ ಹೊಸ ಆದೇಶ ಜಾರಿಮಾಡಿದೆ.
ಶಿಕ್ಷಣ ಇಲಾಖೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಮಾಡಿದ್ದೇವೆ. ಜನಿವಾರ ಘಟನೆ ಇತ್ತೀಚೆಗೆ ಆಗಿತ್ತು. ಇದರಿಂದ ಮಕ್ಕಳಿಗೆ ಸಮಸ್ಯೆ ಆಗ್ತಿತ್ತು. ಮಾನಸಿಕ ಹಿಂಸೆ ಆಗ್ತಿತ್ತು. ಆದ್ದರಿಂದ ಧಾರ್ಮಿಕ ವಸ್ತ್ರಗಳಿಗೆ ಶಾಲಾ-ಕಾಲೇಜುಗಳಿಗೆ ಅವಕಾಶ ನೀಡಲಾಗಿದೆ. ಜನಿವಾರ, ಶಿವಧಾರ ಸೇರಿ ಧಾರ್ಮಿಕ ವಸ್ತುಗಳಿಗೆ ಅವಕಾಶ ನೀಡಲಾಗಿದೆ. 1-12ನೇ ತರಗತಿವರೆಗೂ ಇದು ಅನ್ವಯವಾಗಲಿದೆ. ಎಲ್ಲಾ ಧರ್ಮದ ಧಾರ್ಮಿಕ, ಸಂಪ್ರದಾಯದ ವಸ್ತುಗಳಿಗೂ ಅವಕಾಶ ಕೊಡಲಾಗಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.
ಹಿಜಬ್‌ಗೆ ಶಾಲಾ – ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಪೇಟ/ಟರ್ಬನ್, ಜನಿವಾರ/ಪವಿತ್ರ ದಾರ, ಶಿವದಾರ, ರುದ್ರಾಕ್ಷಿ ತಲೆವಸ್ತ್ರ/ಹಿಜಬ್‌ಗೆ ಅವಕಾಶ ಕಲ್ಪಿಸಲಾಗಿದೆ. ಮಕ್ಕಳ ಪರವಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ವಿವರಿಸಿದ್ದಾರೆ.