ಕೊಡವೂರು ಮಹಾರುದ್ರ ಯಾಗ: ಪೇಜಾವರ ವಿಶ್ವಪ್ರಸನ್ನ ಶ್ರೀಗಳು ಭಾಗಿ
Friday, May 15, 2026
ಕೊಡವೂರು ಶ್ರೀ ಶಂಕರನಾರಾಯಣ ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ ಆಯೋಜಿಸಿರುವ ಮಹಾರುದ್ರಯಾಗ ಕಾರ್ಯಕ್ರಮಕ್ಕೆ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಆಗಮಿಸಿದರು.
ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಮಹಾರುದ್ರ ಯಾಗ ಸಮಿತಿಯ ಗೌರವಾಧ್ಯಕ್ಷ ಪ್ರಸಾದ್ ರಾಜ್ ಕಾಂಚನ್ ಅವರು ಭಕ್ತಿಪೂರ್ವಕವಾಗಿ ಸ್ವಾಗತಿಸಿದರು. ಈ ವೇಳೆ ಸಮಿತಿಯ ಪ್ರಮುಖರಾದ ಪ್ರಕಾಶ್ ಕೊಡವೂರು, ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ತಾರಾನಾಥ ಪೂಜಾರಿ, ಹೆಚ್.ಪಿ.ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಅಧ್ಯಕ್ಷ ಹರಿಪ್ರಸಾದ್ ರೈ ಮೊದಲಾದವರು ಉಪಸ್ಥಿತರಿದ್ದರು.

