ಮಣಿಪಾಲದಲ್ಲಿ ಅನಧಿಕೃತ ಫುಟ್ಪಾತ್ ವ್ಯಾಪಾರಿಗಳ ತೆರವು ಕಾರ್ಯಾಚರಣೆ
Wednesday, May 20, 2026
ಮಣಿಪಾಲ ಟೈಗರ್ ಸರ್ಕಲ್ ಬಳಿ ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಚರಣೆ ಇಂದು ನಡೆಯಿತು.
ಫುಟ್ಪಾತ್ ಗಳನ್ನು ಅತಿಕ್ರಮಿಸಿ ತರಕಾರಿ ವ್ಯಾಪಾರ ನಡೆಸುತ್ತಿದ್ದು, ಇದರಿಂದ ಪಾದಚಾರಿಗಳಿಗೆ ಹಾಗೂ ವಾಹನ ಸಂಚಾರಕ್ಕೂ ಅಡಚಣೆಯಾಗುತ್ತಿತ್ತು. ಇಂದು ನಗರಸಭೆ ಅಧಿಕಾರಿಗಳು ಮಣಿಪಾಲ ಠಾಣಾ ಪೊಲೀಸರ ಸಹಕಾರದಿಂದ ವ್ಯಾಪಾರವನ್ನು ತೆರವುಗೊಳಿಸಿದರು.
ಪಾದಚಾರಿಗಳಿಗೆ ಮೀಸಲಿಟ್ಟ ಜಾಗದಲ್ಲಿ ವಾಹನಗಳ ನಿಲುಗಡೆ ಹಾಗೂ ವ್ಯಾಪಾರ ವಹಿವಾಟು ನಡೆಸುವುದನ್ನು ತಡೆಯಲು ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಈ ಕ್ರಮ ಕೈಗೊಳ್ಳಲಾಯಿತು.

