-->
ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ಸಿದ್ದರಾಮಯ್ಯ ರಾಜೀನಾಮೆ…?!

ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ಸಿದ್ದರಾಮಯ್ಯ ರಾಜೀನಾಮೆ…?!


ರಾಜ್ಯದ ನಾಯಕತ್ವ ಬದಲಾವಣೆಯ ಬೆಳವಣಿಗೆಗಳು ವೇಗ ಪಡೆದುಕೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

2023ರ ವಿಧಾನಸಭಾ ಚುನಾವಣೆಯ ನಂತರ ಮಾಡಿಕೊಳ್ಳಲಾಗಿದ್ದ ಅಧಿಕಾರ ಹಂಚಿಕೆಯ ಒಪ್ಪಂದದ ಅನ್ವಯ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎನ್ನಲಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸ್ಥಾನ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಜವಾಬ್ದಾರಿಯನ್ನು ನೀಡಲು ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದ್ದು, ಸಿದ್ದರಾಮಯ್ಯ ಅವರು ಕೂಡ ತಾವು ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ಹೇಳಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article