ಕಾಪು ತಾಲೂಕು ವ್ಯಾಪ್ತಿಯ ನಿವೇಶನ ಹಂಚಿಕೆ ಕುರಿತು ಸಭೆ
Friday, May 22, 2026
ಕಾಪು ತಾಲೂಕು ವ್ಯಾಪ್ತಿಯ ನಿವೇಶನ ಹಂಚಿಕೆ ಕುರಿತು ಶಾಸಕರಾದ ಗುರ್ಮೆ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಕಾಪು ತಹಶೀಲ್ದಾರರ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.
ಸಭೆಯಲ್ಲಿ ಕಾಪು ತಾಲೂಕು ವ್ಯಾಪ್ತಿಯ 16 ಗ್ರಾಮ ಪಂಚಾಯತ್ ಹಾಗೂ ಕಾಪು ಪುರಸಭೆಯ ವ್ಯಾಪ್ತಿಗಳಲ್ಲಿನ ಸರಕಾರಿ ನಿವೇಶನಗಳನ್ನು ನಿವೇಶನ ರಹಿತ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಬಗ್ಗೆ ಮತ್ತು ಈಗಾಗಲೇ ಹಸ್ತಾಂತರಗೊಂಡ ನಿವೇಶನಗಳಲ್ಲಿ ಭೌತಿಕ ಹಾಗೂ ತಾಂತ್ರಿಕ ದೋಷಗಳನ್ನು ಸರಿಪಡಿಸಿಕೊಂಡು ಫಲಾನುಭವಿಗಳಿಗೆ ನಿವೇಶನಗಳನ್ನು ವಿತರಿಸುವ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರ ಅನಂತ ಶಂಕರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ ಕುಮಾರ್, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ ಹಾಗೂ ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
.jpeg)