-->
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ.

ರಾಜ್ಯಪಾಲರು ಪ್ರಸ್ತುತ ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು.

ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ. ಮೂಲಗಳ ಪ್ರಕಾರ ರಾಜ್ಯಪಾಲರು ನಾಳೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯಪಾಲರು ಮರಳಿದ ಬಳಿಕವಷ್ಟೇ ರಾಜೀನಾಮೆ ಅಂಗೀಕಾರದ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.


ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಚರಿತ್ರೆಯ ದಣಿವರಿಯದ ಹೋರಾಟಗಾರ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿದೆ.

Ads on article

Advertise in articles 1

advertising articles 2

Advertise under the article