ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾದ ಕುಂದಾಪುರ ಶಾಸಕ ಕಿರಣ್ ಕೊಡ್ಗಿ
Thursday, May 28, 2026
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿದರು.
ಸಚಿವರೊಂದಿಗೆ ಸುಧೀರ್ಘ ಚರ್ಚೆ ನಡೆಸಿದ ಕಿರಣ್ ಕೊಡ್ಗಿ ಅವರು ಕುಂದಾಪುರ ಕ್ಷೇತ್ರದ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಗ್ರಾಮೀಣ ಹಾಗೂ ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಗುಣಮಟ್ಟದ ಶಿಕ್ಷಣಕ್ಕಾಗಿ ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡುವ ಬಗ್ಗೆ ಕ್ಷೇತ್ರದ ಶೈಕ್ಷಣಿಕ ಅಗತ್ಯತೆಗಳಿಗೆ ತಕ್ಷಣವೇ ಸ್ಪಂದಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿದರು.
.jpeg)