-->
ಮೀನು ಸಾಗಾಟ ಲಾರಿ ಪಲ್ಟಿ: ಚಾಲಕ ಅಪಾಯದಿಂದ ಪಾರು

ಮೀನು ಸಾಗಾಟ ಲಾರಿ ಪಲ್ಟಿ: ಚಾಲಕ ಅಪಾಯದಿಂದ ಪಾರು


ಮೀನು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ಉಡುಪಿ ನಗರ ಸಮೀಪದ ಅಂಬಾಗಿಲು ಬಳಿ ಇಂದು ಸಂಭವಿಸಿದೆ.

 

ಉಡುಪಿ ಕಡೆಯಿಂದ ಕುಂದಾಪುರದತ್ತ ಸಾಗುತ್ತಿದ್ದ ಲಾರಿಗೆ ಟೈಯರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿಗೆ ಪಲ್ಟಿಯಾಗಿದೆ.


ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಪಘಾತ ಮಾಹಿತಿ ತಿಳಿದ ಕೂಡಲೇ ಉಡುಪಿ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ, ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿ ಕ್ರಮ ಕೈಗೊಂಡರು.ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ, ಬಳಿಕ ಪರಿಸ್ಥಿತಿ ಸಹಜಗೊಂಡಿತು.

Ads on article

Advertise in articles 1

advertising articles 2

Advertise under the article