-->
ಕೊಡವೂರು ಮಹಾರುದ್ರಯಾಗ: ಪುರೋಹಿತರಿಂದ ರುದ್ರಜಪ ಮೃತ್ಯುಂಜಯ ಯಾಗ

ಕೊಡವೂರು ಮಹಾರುದ್ರಯಾಗ: ಪುರೋಹಿತರಿಂದ ರುದ್ರಜಪ ಮೃತ್ಯುಂಜಯ ಯಾಗ



ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗ ಪ್ರಯುಕ್ತ ಎರಡನೇ ದಿನದ ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆಯಿಂದ ಆರಂಭಗೊಂಡವು. 


ವೇದ ಮೂರ್ತಿ ಹಯವದನ ತಂತ್ರಿಗಳು ಪುತ್ತೂರು, ಮಧುಸೂದನ ತಂತ್ರಿಗಳು, ಸುಬ್ರಹ್ಮಣ್ಯ ಭಟ್, ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 8ಗಂಟೆಗೆ ಪುರೋಹಿತರಿಂದ ರುದ್ರಜಪ ಮೃತ್ಯುಂಜಯ ಯಾಗ ಆರಂಭಗೊಂಡವು. ಬಳಿಕ ಶಂಕರನಾರಾಯಣ ದೇವರಿಗೆ ಕಲಶಾಧಿವಾಸ, ಅಧಿವಾಸ ಹೋಮ, ಪರಿವಾರ ಕಲಶ ಸಹಿತ ವಿವಿಧ ಹೋಮಹವನಗಳು ನೆರವೇರಿದವು.




ಮಹಾ ರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್ ರಾಜ್ ಕಾಂಚನ್, ಕೊಡವೂರು ಶಂಕರನಾರಾಯಣ ದೇವಸ್ಥಾನದ ಅಧ್ಯಕ್ಷರಾದ ಪ್ರಕಾಶ್ ಜಿ ಕೊಡವೂರು, ಮಹಾರುದ್ರ ಯಾಗ ಸಮಿತಿಯ ಪ್ರಧಾನ ಸಂಚಾಲಕರಾದ ತಾರನಾಥ ಪೂಜಾರಿ, ಸಂಚಾಲಕರಾದ ನಂದಕಿಶೋರ್ ಕೆಮ್ಮಣ್ಣು ರಮೇಶ್ ತಿಂಗಳಾಯ ಮೊದಲಾದ ಗಣ್ಯರು ಉಪಸ್ಥಿತರಿದ್ದರು.


Ads on article

Advertise in articles 1

advertising articles 2

Advertise under the article