-->
ಶೃಂಗೇರಿ ಕ್ಷೇತ್ರದ ಶಾಸಕನಾಗಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಪ್ರಮಾಣ ಪತ್ರ ಸ್ವೀಕಾರ

ಶೃಂಗೇರಿ ಕ್ಷೇತ್ರದ ಶಾಸಕನಾಗಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಪ್ರಮಾಣ ಪತ್ರ ಸ್ವೀಕಾರ

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರ 255 ಮತಗಳು ಅಸಿಂಧುಗೊಂಡಿದ್ದು, ಈ ಹಿಂದೆ ಪರಾಭವಗೊಂಡಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಗೆಲುವು ಸಾಧಿಸಿದ್ದಾರೆ. ಜೀವರಾಜ್ ಅವರು 52 ಮತಗಳ ಮುನ್ನಡೆ ಸಾಧಿಸಿ ಶಾಸಕರಾಗಿ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. 

ತೀವ್ರ ಗೊಂದಲ, ನಾಟಕೀಯ ಬೆಳವಣಿಗೆಗಳ ನಡುವೆ ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಶನಿವಾರ ತಡರಾತ್ರಿ ವೇಳೆಗೆ ಮುಕ್ತಾಯಗೊಂಡಿತು. 2023ರಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರು ಪಡೆದ ಮತಗಳ ಪೈಕಿ ಬರೋಬ್ಬರಿ 255 ಮತಗಳನ್ನು ಅಸಿಂಧು ಎಂದು ವರಿಗಣಿಸಲಾಗಿದೆ. ಹೀಗಾಗಿ, ಪರಾಜಿತ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಗೆ ಇದೀಗ 52 ಮತಗಳ ಮುನ್ನಡೆ ಸಿಕ್ಕಿದೆ. ಇಂದು ಡಿ.ಎನ್‌.ಜೀವರಾಜ್ ಅವರಿಗೆ ಚುನಾವಣಾ ಅಧಿಕಾರಿ ಶಾಸಕ ಪ್ರಮಾಣ ಪತ್ರ ಹಸ್ತಾಂತರಿಸಿದರು.

2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರು ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ಅಂದು ರಾಜೇಗೌಡರು ಇವಿಎಂ ಮತಗಳ ಎಣಿಕೆ ವೇಳೆ 324 ಮತಗಳ ಮುನ್ನಡೆ ಸಾಧಿಸಿದ್ದರು.

2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರು ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ಅಂದು ರಾಜೇಗೌಡರು ಇವಿಎಂ ಮತಗಳ ಎಣಿಕೆ ವೇಳೆ 324 ಮತಗಳ ಮುನ್ನಡೆ ಸಾಧಿಸಿದ್ದರು.

Ads on article

Advertise in articles 1

advertising articles 2

Advertise under the article