ಮರಕ್ಕೆ ಕಾರು ಡಿಕ್ಕಿ: ಮಹಿಳೆ ಗಂಭೀರ, ಮಗು ಸಹಿತ ಐವರಿಗೆ ಗಾಯ
Sunday, May 03, 2026
ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿಯ ಕೆಮ್ಮಣ್ಣು ಸಮೀಪದ ನಿಡಂಬಳ್ಳಿ ಗರಡಿ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿ ಮೂವರು ಮಹಿಳೆಯರು ಒಂದು ಮಗು ಹಾಗೂ ಇಬ್ಬರು ಪುರುಷರು ಸೇರಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಮಹಿಳೆ ಗಂಭೀರ ಗಾಯಗೊಂಡಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಉಳಿದ 5 ಜನ ಕೂಡ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರಿನಲ್ಲಿದ್ದವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.