ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ
Wednesday, May 13, 2026
ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ಅವರು ನಟಿಸಿದ್ದರು. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು.