-->
ಮಾದಕ ವಸ್ತು ಸೇವನೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಯುವಕನ ವಿರುದ್ಧ ಪ್ರಕರಣ ದಾಖಲು

ಮಾದಕ ವಸ್ತು ಸೇವನೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಯುವಕನ ವಿರುದ್ಧ ಪ್ರಕರಣ ದಾಖಲು


ಮಾದಕವಸ್ತು ಸೇವಿಸಿ ವಾಹನ ಚಲಾಯಿಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಯುವಕನೊಬ್ಬನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇ. 3 ರಂದು ಮಧ್ಯಾಹ್ನ ವೇಳೆ, ವಿಟ್ಲ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಬಿ.ಎಸ್. ನಾಯಕ್ ಅವರು ಸಿಬ್ಬಂದಿಗಳೊಂದಿಗೆ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ KA-19-HX-0497 ಸಂಖ್ಯೆಯ ಸ್ಕೂಟರ್‌ನಲ್ಲಿ ಹೆಲ್ಮೆಟ್ ಧರಿಸದೆ ಸಾಗುತ್ತಿದ್ದ ವ್ಯಕ್ತಿಯನ್ನು ತಪಾಸಣೆಗೆ ತಡೆದು ನಿಲ್ಲಿಸಿದಾಗ ಆರೋಪಿ ಉಪ ನಿರೀಕ್ಷಕರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದನು. ಆತನ ವರ್ತನೆ ಅನುಮಾನಾಸ್ಪದವಾಗಿದ್ದರಿಂದ ವಿಚಾರಣೆ ನಡೆಸಿದಾಗ, ಆತನು ಬಂಟ್ವಾಳ ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26) ಎಂದು ತಿಳಿದುಬಂದಿದ್ದು, ತಾನು ಮಾದಕವಸ್ತು ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕವಸ್ತು ಸೇವನೆ ದೃಢಪಟ್ಟಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 100/2026 ಅಡಿಯಲ್ಲಿ ಕಲಂ 27(b) NDPS Act 1985, 221 BNS ಹಾಗೂ KMV Rule 230(1) ಜೊತೆಗೆ 177 IMV Act ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Ads on article

Advertise in articles 1

advertising articles 2

Advertise under the article