-->
ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಗೆಲುವು: ಕಾಪುವಿನಲ್ಲಿ ಬಿಜೆಪಿ ಸಂಭ್ರಮಾಚರಣೆ

ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಗೆಲುವು: ಕಾಪುವಿನಲ್ಲಿ ಬಿಜೆಪಿ ಸಂಭ್ರಮಾಚರಣೆ


ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಐತಿಹಾಸಿಕ ಗೆಲುವಿನ ಸಲುವಾಗಿ ಕಾಪು ಮಂಡಲ ಬಿಜೆಪಿ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿ ಬಳಿ ವಿಜಯೋತ್ಸವ ಆಚರಿಸಲಾಯಿತು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಭಾರತೀಯ ಜನತಾ ಪಕ್ಷದ ಗೆಲುವಿಗೆ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಪಕ್ಷದ ವರಿಷ್ಠರು, ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಮಾಜಿ ಶಾಸಕರಾದ ಸೋಮಶೇಖರ ರೆಡ್ಡಿ, ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಕಾಪು ಪುರಸಭೆಯ ಸದಸ್ಯರು ವಿವಿಧ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.



Ads on article

Advertise in articles 1

advertising articles 2

Advertise under the article