-->
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಕಾರಿನಲ್ಲಿದ್ದವರು ಅಪಾಯದಿಂದ ಪಾರು

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಕಾರಿನಲ್ಲಿದ್ದವರು ಅಪಾಯದಿಂದ ಪಾರು


ಕಾರೊಂದು ನಿಯಂತ್ರಣ ತಪ್ಪಿ ಹೈಟೆನ್ಶನ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಪಂಜಿಮಾರು-ಕೋಡುಗುಡ್ಡೆ ಬಳಿ ನಡೆದಿದೆ. 

ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉಡುಪಿಯ ವಾಹನ ಶೋರೂಮ್ ಒಂದರ ಉದ್ಯೋಗಿಗಳಾದ ಈ ಯುವಕರು ಬೆಳ್ಮಣ್‌ನಲ್ಲಿ ನಡೆಯುತ್ತಿದ್ದ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಪಂಜಿಮಾರು-ಕೋಡುಗುಡ್ಡೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು, ನಂತರ ರಸ್ತೆಯ ಇನ್ನೊಂದು ಬದಿಯ ಚರಂಡಿಗೆ ಬಿದ್ದಿದೆ.ಈ ಅಪಘಾತದಲ್ಲಿ ಕಾರು ಜಖಂಗೊಂಡಿದೆ. ಅಪಘಾತದ ತೀವ್ರತೆಗೆ ಕಾರಿನ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರಿಂದ, ಕಾರಿನಲ್ಲಿದ್ದ ಐವರು ಯುವಕರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಈ ಅಪಘಾತದಿಂದಾಗಿ ಕೇವಲ ಎರಡು ತಿಂಗಳ ಹಿಂದೆ ಅಳವಡಿಸಲಾಗಿದ್ದ ಎರಡು ಡಬಲ್-ಫೀಡರ್ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದು, ಶಿರ್ವ ಮೆಸ್ಕಾಂ ವಿಭಾಗದ ಅಧಿಕಾರಿ ಮಂಜಪ್ಪ ಅವರ ನೇತೃತ್ವದಲ್ಲಿ ವಿದ್ಯುತ್ ಸಂಪರ್ಕಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಯಿತು.

Ads on article

Advertise in articles 1

advertising articles 2

Advertise under the article