-->
ಕುಂದಾಪುರದಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ

ಕುಂದಾಪುರದಲ್ಲಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ


ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿ ದೇವರಾಜ್ ಅರಸು, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳ ಸಹಯೋಗದಲ್ಲಿ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ನಡೆಯಿತು. 


ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿದರು. ಬಳಿಕ ಮಾತನಾಡಿದ ಅವರು, ದೇವರಾಜ್ ಅರಸು ಅವರು ಹಿಂದುಳಿದ ವರ್ಗಗಳ ಆಶಾಕಿರಣ ಅವರ ಹೆಸರಿನ ಯೋಜನೆಯಡಿ ಇಂದು ವಿತರಿಸುತ್ತಿರುವ ಹೊಲಿಗೆ ಯಂತ್ರಗಳು ಕೇವಲ ಯಂತ್ರವಲ್ಲ ನಮ್ಮ ತಾಯಂದಿರಿಗೆ ಸಹೋದರರಿಗೆ ಸ್ವಂತ ದುಡಿಮೆಯ ಶಕ್ತಿ ನೀಡುವ ಸಾಧನ ಎಂದರು. ಈ ಸಂದರ್ಭದಲ್ಲಿ  ಡಿ.ದೇವರಾಜ್ ಅರಸು ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿ ಪ್ರಶಾಂತ್ ಅವರು ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಮಹಿಮ ಶೆಟ್ಟಿ ಕೆ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು. 

Ads on article

Advertise in articles 1

advertising articles 2

Advertise under the article