ದ್ವಿಚಕ್ರ ವಾಹನಕ್ಕೆ ಕ್ರೇನ್ ಡಿಕ್ಕಿ: ಸವಾರ ಸಾವು
Tuesday, May 05, 2026
ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಕ್ರೇನ್ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ನಿವಾಸಿ ಜಯ ಮೇಸ್ತ್ರಿ(49) ಮೃತಪಟ್ಟವರು. ಇವರು ಬೆಳಾಲು ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು.
ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.