-->
ವ್ಯಕ್ತಿ ನಾಪತ್ತೆ: ದೂರು ದಾಖಲು

ವ್ಯಕ್ತಿ ನಾಪತ್ತೆ: ದೂರು ದಾಖಲು


ಮಂಗಳೂರಿನ ಶಕ್ತಿನಗರ ಕ್ಲಾಸಿಕ್ ಪರ್ಲ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಸುನೀಲ್ ಶಂಕರ್ ಬೇಕಲ್ (48) ಎಂಬವರು ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುನೀಲ್ ಶಂಕರ್ ಬೇಕಲ್ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಅಪಘಾತವಾಗಿದ್ದು, ಸರಕಾರಿ ವೆನ್‌ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದು,ಎಪ್ರಿಲ್ 2ರಂದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು. ಅಲ್ಲಿಂದ ನೇರವಾಗಿ ಯಾರಿಗೂ ತಿಳಿಸದೇ ಮನೆ ಬಿಟ್ಟು ಹೋಗಿರುತ್ತಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದವರ ಬಗ್ಗೆ ಮಾಹಿತಿ  ಸಿಕ್ಕಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article