ನೀಟ್ ಪರೀಕ್ಷೆ ಫಲಿತಾಂಶ ಭಯ: ನಾಪತ್ತೆಯಾದ ವಿದ್ಯಾರ್ಥಿ
Tuesday, May 05, 2026
ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯೋರ್ವ ಫಲಿತಾಂಶದ ಭಯದಿಂದ ಮನೆ ಬಿಟ್ಟು ನಾಪತ್ತೆಯಾದ ಬಗ್ಗೆ ಕೋಟ ಠಾಣೆಯಲ್ಲಿ ದೂರು ದಾಖಲಾಗಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಅಭಿಷೇಕ್ ಮೇ 3 ಉಡುಪಿಯಲ್ಲಿ ನೀಟ್ ಪರೀಕ್ಷೆ ಬರೆದಿದ್ದನು. ಮೇ 4ರ ಭಾನುವಾರ ಮಧ್ಯಾಹ್ನ ಹಾಸನದಲ್ಲಿರುವ ತನ್ನ ತಾಯಿಗೆ ಕರೆ ಮಾಡಿ, ಮಣಿಪಾಲಕ್ಕೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದನು. ಆದರೆ ಸಂಜೆಯಾದರೂ ಆತ ಮನೆಗೆ ಮರಳದಿದ್ದಾಗ ಆತಂಕಗೊಂಡ ಪೋಷಕರು ಹುಡುಕಾಟ ಆರಂಭಿಸಿದ್ದಾರೆ. ಈ ವೇಳೆ ಮನೆಯಲ್ಲಿ ಆತ ಬರೆದು ಇಟ್ಟಿದ್ದ ಪತ್ರವೊಂದು ಪತ್ತೆಯಾಗಿದ್ದು, ಅದರಲ್ಲಿ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬರಬಹುದು ಎಂಬ ಭೀತಿಯನ್ನು ವ್ಯಕ್ತಪಡಿಸಿರುವುದು ಬೆಳಕಿಗೆ ಬಂದಿದೆ.
ಪರೀಕ್ಷೆಯ ಒತ್ತಡ ಅಥವಾ ಫಲಿತಾಂಶದ ಆತಂಕದಿಂದ ಆತ ಮನೆ ಬಿಟ್ಟು ಹೋಗಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಆತನ ತಂದೆ ನಟರಾಜ ಸಿ. ಅವರು ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಾಪತ್ತೆಯಾದ ಹುಡುಗನ ಚಹರೆ: 5 ಅಡಿ 9 ಇಂಚು ಎತ್ತರ ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ.
ಭಾಷೆ: ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಕಪ್ಪು ಬಣ್ಣದ ಪ್ಯಾಂಟ್ ಮತ್ತು ಶರ್ಟ್ ಧರಿಸಿದ್ದ
ಆತನ ಬಳಿ ಒಂದು ಟ್ರಾಲಿ ಬ್ಯಾಗ್ ಹಾಗೂ ಬೆನ್ನಿಗೆ ಹಾಕುವ ಬ್ಯಾಗ್ ಇತ್ತು.
ಈ ಘಟನೆಗೆ ಸಂಬಂಧಿಸಿದಂತೆ ಕೋಟಿ ಪೊಲೀಸ್ ಠಾಣೆಯಲ್ಲಿ ಅ.ಕ್ರ ಸಂಖ್ಯೆ 75/2026, ಕಲಂ: 137(2) BNS ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈತನ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ತಕ್ಷಣವೇ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಮಾಹಿತಿ ನೀಡಲು ಕೋರಲಾಗಿದೆ. ಕೋಟ ಪೊಲೀಸ್ ಠಾಣೆ:: 0820-2564155 ಬ್ರಹ್ಮಾವರ ವೃತ್ತ ನಿರೀಕ್ಷಕರು : 0820-2561966