-->
ಮನೆ ಕಳವು ಪ್ರಕರಣ: ಆರೋಪಿಯ ಬಂಧನ

ಮನೆ ಕಳವು ಪ್ರಕರಣ: ಆರೋಪಿಯ ಬಂಧನ


ಎ.23ರಂದು ಅಪರಾಹ್ನ ಮೂರು ಗಂಟೆ ಯಿಂದ ರಾತ್ರಿ 10ಗಂಟೆ ಮದ್ಯಾವಧಿಯಲ್ಲಿ ಬೈಂದೂರು ತಾಲೂಕು ಯಡ್ತರೆ ಗ್ರಾಮದ ಎಸ್‌ಬಿಐ ಬ್ಯಾಂಕ್ ಹಿಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. 


ರಾಜಸ್ತಾನದ ಜೋಧ್‌ಪುರ ಜಿಲ್ಲೆಯ ಸಿರಿಗ್ರಾತ್ ತಾಲೂಕಿನ ಸೇತ್ರಾವ್‌ನ ಮಹೇಂದ್ರ ಸೈನ್ (23) ಬಂಧಿತ ಆರೋಪಿ. ಈತ ಬೈಂದೂರು ಬಂಕೇಶ್ವರದ ಸ್ಟಿಫನ್ ಎಂಬವರ ಮನೆಯಲ್ಲಿ ವಾಸವಾಗಿದ್ದ. ಎ. ಎ.23ರಂದು ಬೈಂದೂರು ತಾಲೂಕು ಯಡ್ತರೆ ಗ್ರಾಮದ ಎಸ್‌ಬಿಐ ಬ್ಯಾಂಕ್ ಹಿಂಭಾಗದಲ್ಲಿ ರಾಜಸ್ತಾನ್ ಮೂಲದ ರಾವಲ್ ಸಿಂಗ್ ಎಂಬವರು ವಾಸವಾಗಿದ್ದ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿತ್ತು.  ಮನೆಯ ಬಾಗಿಲಿನ ಬೀಗ ಮುರಿದು ಒಳನುಗ್ಗಿ ಮನೆಯೊಳಗಿನ ಗೋಡ್ರೆಜ್‌ನಲ್ಲಿರಿಸಿದ್ದ ಆರು ಲಕ್ಷ ರೂ.ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬೈಂದೂರು ವೃತ್ತನಿರೀಕ್ಷಕ ಶಿವಕುಮಾರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಆತನಿಂದ ಕಳವು ಮಾಡಿರುವ ಆರು ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದೆ. ಈ ಕುರಿತು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article