-->
ಚಿಪ್ಪುಹಂದಿಯ ಚಿಪ್ಪು ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ

ಚಿಪ್ಪುಹಂದಿಯ ಚಿಪ್ಪು ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ


ಮಂಗಳೂರಿನ ಕದ್ರಿ ಪಾರ್ಕ್ ಬಳಿಯಲ್ಲಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. 

ಬೆಂಗಳೂರಿನ ಹೆಚ್ ಆರ್ ಜಗದೀಶ(50), ಕನಕಪುರ ನಿವಾಸಿ ಸಿದ್ದು ನಾಯ್ಕ (38), ಬನಶಂಕರಿ ನಿವಾಸಿ ಬಾಬು (48) ಬಂಧಿತರು.ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. 

ಬಂಧಿತರಿಂದ ಚಿಪ್ಪು ಹಂದಿಯ 5.200 ಕಿ.ಗ್ರಾಂ ತೂಕದ ಚಿಪ್ಪು ಹಾಗೂ ಸುಮಾರು 3 ಲಕ್ಷ ಮೌಲ್ಯದ ಸ್ವೀಫ್ಟ್ ಕಾರನ್ನು ವಶಪಡಿಸಲಾಗಿದೆ. 

ಬೆಂಗಳೂರು ಮತ್ತು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್‍ ನೆಜ್ಜೂರು  ಅವರ ಮಾರ್ಗದರ್ಶನದಲ್ಲಿ ಮಂಗಳೂರು ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ದಿಲೀಪ್ ಜಿ.ಆರ್ ಹಾಗೂ ಸಿಬ್ಬಂದಿಗಳಾದ ತಾರನಾಥ ಎಸ್ ಮತ್ತು ಅಬ್ದುಲ್ ರವೂಫ್  ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

Ads on article

Advertise in articles 1

advertising articles 2

Advertise under the article