-->
ಕೋಟ ಸಾಲಿಗ್ರಾಮ ರೋಟರಿ ಸಮುದಾಯದಳದಿಂದ ಸ್ವಚ್ಛತಾ ಕಾರ್ಯ

ಕೋಟ ಸಾಲಿಗ್ರಾಮ ರೋಟರಿ ಸಮುದಾಯದಳದಿಂದ ಸ್ವಚ್ಛತಾ ಕಾರ್ಯ


ರೋಟರಿ ಸಮುದಾಯದಳ ಮೂಡುಗಿಳಿಯಾರು ವತಿಯಿಂದ ಪ್ರತೀ ಭಾನುವಾರ ಹಮ್ಮಿಕೊಳ್ಳಲಾಗುವ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಗಿಳಿಯಾರು-ಕೋಟ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿದ್ದ ಕಸ ಹಾಗೂ ಪ್ಲಾಸ್ಟಿಕ್ ತ್ಯಾಜ್ಯವನ್ನು ತೆರವುಗೊಳಿಸಲಾಯಿತು.


ಕೋಟ ಸಾಲಿಗ್ರಾಮ ರೋಟರಿ ಕ್ಲಬ್ ಸಮುದಾಯದಳದ ಸದಸ್ಯರು ರಸ್ತೆ ಬದಿಯಲ್ಲಿದ್ದ ಪ್ಲಾಸ್ಟಿಕ್, ತ್ಯಾಜ್ಯ ಹಾಗೂ ಕಸವನ್ನು ಸಂಗ್ರಹಿಸಿ ಪರಿಸರ ಸ್ವಚ್ಛತೆಗೆ ಕೈಜೋಡಿಸಿದರು. 

ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಿಯಮಿತವಾಗಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ಇದರ ನಿಕಟ ಪೂರ್ವ ಅಧ್ಯಕ್ಷ ತಿಮ್ಮ ಪೂಜಾರಿ ತಿಳಿಸಿದರು.‌ 

ಸ್ಥಳೀಯರು ರೋಟರಿ ಸಮುದಾಯದಳದ ಈ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article