-->
ಮೇ ಅಂತ್ಯಕ್ಕೆ ವಾಡಿಕೆಗಿಂತ ಹೆಚ್ಚು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮೇ ಅಂತ್ಯಕ್ಕೆ ವಾಡಿಕೆಗಿಂತ ಹೆಚ್ಚು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ


ಬಿಸಿಲ ತಾಪಕ್ಕೆ ಬಸವಳಿದ ಇಳೆಗೆ ಮೇ ಅಂತ್ಯದಲ್ಲಿ ಮಳೆ ತಂಪೆರೆಯಲಿದೆ. ಮೇ ತಿಂಗಳಲ್ಲಿ ದೇಶಾದ್ಯಂತ ವಾಡಿಕೆಗಿಂತ ಹೆಚ್ಚು ಅಂದರೆ, ದೀರ್ಘಾವಧಿಯ ಸರಾಸರಿಗಿಂತ ಶೇ.110ಕ್ಕೂ ಹೆಚ್ಚು ಮಳೆಯಾಗುವ ಮುನ್ಸೂಚನೆ ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡು, ಬೆಂಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೇ ಅಂತ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.  ಮಳೆ ಬರುವ ಸಾಧ್ಯತೆ ಇದ್ದರೂ, ಮೇ 22 ರಿಂದ 28 ರ ನಡುವೆ ಹಲವು ಪ್ರದೇಶಗಳಲ್ಲಿ ಹೀಟ್‌ವೇವ್‌ ಅಥವಾ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

Ads on article

Advertise in articles 1

advertising articles 2

Advertise under the article