ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ಲಾವಣ್ಯ ನಿಧನ
Saturday, May 02, 2026
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಬೆಸ್ಕಾಂ ವಿಜಿಲೆನ್ಸ್ ಎಸ್‌ಪಿ ಬಿ. ಎನ್. ಲಾವಣ್ಯ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಧ್ಯಾಹ್ನ 2:30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು 10 ವರ್ಷದ ಗಂಡು ಮಗು ಮತ್ತು 3 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದವರಾದ ಲಾವಣ್ಯ ಅವರು, 2023ರಿಂದಲೂ ವಿವಿಧ ವಿಭಾಗಗಳಲ್ಲಿ ಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದರು.
ಮಂಡ್ಯ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆಬೆಂಗಳೂರಿನಲ್ಲಿ ಗುಪ್ತಚರ ಇಲಾಖೆ ಮತ್ತು ಡಿ.ಸಿ.ಆರ್.ಇ. ವಿಭಾಗದ ಎಸ್‌ಪಿಯಾಗಿಯೂ ಕಾರ್ಯನಿರ್ವಹಿಸಿದ್ದರು.