-->
ಹೈಡ್ರೊವೀಡ್ ಗಾಂಜಾ ಸಾಗಾಟ: ಯುವತಿಯ ಬಂಧನ

ಹೈಡ್ರೊವೀಡ್ ಗಾಂಜಾ ಸಾಗಾಟ: ಯುವತಿಯ ಬಂಧನ


ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತಳಿಂದ ಸುಮಾರು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವೀಡ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಸುಹಾನಾ (21) ಬಂಧಿತ ಯುವತಿ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿದ್ದು, ಪ್ರಸ್ತುತ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿಯಾಗಿದ್ದಾಳೆ ಎಂದು ತಿಳಿದುಬಂದಿದೆ.  ಮೇ 12ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.  ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿತೆ ಚೆನ್ನೈನಿಂದ ಮಾದಕ ವಸ್ತುವನ್ನು ತಂದು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದಳು ಎಂಬುದು ತಿಳಿದುಬಂದಿದೆ.

ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 32/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಮತ್ತು 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಯುವತಿಯ ವಿರುದ್ದ ಈ ಹಿಂದೆ ಕೂಡಾ ಕಾವೂರು ಪೊಲೀಸ್ ಠಾಣೆ ಅ.ಕ್ರ. 37/2026 – ಕಲಂ 8(C), 22(C) ಎನ್‌ಡಿಪಿಎಸ್ ಕಾಯ್ದೆ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ O.R. No: 177/2025-26 – ಕಲಂ 20(b), 2(B), 23(b), 27(A) ಹಾಗೂ 29 ಎನ್‌ಡಿಪಿಎಸ್ ಕಾಯ್ದೆ ಯಡಿ ಪ್ರಕರಣಗಳು ದಾಖಲಾಗಿತ್ತು. 

Ads on article

Advertise in articles 1

advertising articles 2

Advertise under the article