ಉಡುಪಿಯಲ್ಲಿ ಭಾರೀ ಮಳೆ: ಅನಿರೀಕ್ಷಿತ ಮಳೆಗೆ ತಂಪಾದ ಇಳೆ
Thursday, May 07, 2026
ಉಡುಪಿ ಜಿಲ್ಲೆಯ ಹಲವೆಡೆ ಇಂದು ಬೆಳಗ್ಗಿನಿಂದ ಮಳೆ ಸುರಿದಿದ್ದು, ಬಿಸಿಲ ದಾಹಕ್ಕೆ ಬೇಸತ್ತಿದ ಜನ ಕೊಂಚ ನಿರಾಳರಾಗಿದ್ದಾರೆ.
ಇಂದು ಬೆಳಿಗ್ಗೆ ಉಡುಪಿಯ ಕೆಲವು ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿತ್ತು. ಬೆಳಗ್ಗಿನಿಂದ ಮೋಡ ಕವಿದ ವಾತಾವರಣವಿತ್ತು. ಉಡುಪಿ ನಗರ, ಸಂತೆಕಟ್ಟೆ, ಅಲೆವೂರು, ದೆಂದೂರುಕಟ್ಟೆ, ಮಣಿಪಾಲ ಹಾಗೂ ಕಟಪಾಡಿಯಲ್ಲಿ ಉತ್ತಮ ಮಳೆ ಸುರಿಯುತ್ತಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ 7 ದಿನಗಳ ಕಾಲ ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 12ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರೀ ಮಳೆಯೂ ಸುರಿಯಬಹುದೆಂದು ಎಚ್ಚರಿಕೆ ನೀಡಲಾಗಿದೆ.
