ಉಡುಪಿಯಲ್ಲಿ 2 ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ: ಸರ್ಕಾರಕ್ಕೆ ರಮೇಶ್ ಕಾಂಚನ್ ಅಭಿನಂದನೆ
Tuesday, May 05, 2026
ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಉಡುಪಿ ಇಂದ್ರಾಳಿಯ ಮಂಚಿ ಕುಮೇರಿ ಹಾಗೂ ಆದಿವುಡುಪಿ ಮೀನು ಮಾರುಕಟ್ಟೆಯ ಬಳಿಯ ಎರಡು ಅಂಗನವಾಡಿ ಕೇಂದ್ರದ ನೂತನ ಕಟ್ಟಡಕ್ಕೆ ಅನುದಾನ ನೀಡಿದ ಸರ್ಕಾರಕ್ಕೆ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಕೃತಜ್ಞತೆ ಸಲ್ಲಿಸಿದರು.
ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಶಾಸಕ ಯಶ್ ಪಾಲ್ ಸುವರ್ಣ ನೆರವೇರಿಸಿದ್ದರು . ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸತೀಶ್ ಮಂಚಿ,ದಿಲೀಪ್ ಹೆಗ್ಡೆ, ಮಾಜಿ ನಗರಸಭಾ ಸದಸ್ಯರು,ಇಲಾಖಾ ಅಧಿಕಾರಿಗಳು, ಸ್ಥಳೀಯ ಮುಖಂಡರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಅಂಗನವಾಡಿ ಕೇಂದ್ರಗಳ ನೂತನ ಕಟ್ಟಡ ನಿರ್ಮಾಣಕ್ಕೆ 40 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳ್ಳುವಲ್ಲಿ ಮುತುವರ್ಜಿ ವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವ l ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಹಾಗೂ ಅನುದಾನ ಬಿಡುಗಡೆ ಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಕೃತಜ್ಞತೆ ಸಲ್ಲಿಸಿದರು.
