-->
ಹೆದ್ದಾರಿಯಲ್ಲಿ ಅಪಘಾತ ತಡೆಗೆ ಸ್ಪೀಡ್ ಬ್ರೇಕರ್ ಅಳವಡಿಸಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಹೆದ್ದಾರಿಯಲ್ಲಿ ಅಪಘಾತ ತಡೆಗೆ ಸ್ಪೀಡ್ ಬ್ರೇಕರ್ ಅಳವಡಿಸಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ


ಉಡುಪಿ ಜಿಲ್ಲೆಯ ಕಾಪು ಭಾಗದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು, ಸರ್ವಿಸ್ ರಸ್ತೆಯಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಅಧಿಕಾರಿಗಳಿಗೆ ಸೂಚಿಸಿದರು. 


ಕಾಪು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯ  ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಅರಣ್ಯ ಮತ್ತು ಕಂದಾಯ ಇಲಾಖೆ 94/C, 94/CC ಹಕ್ಕುಪತ್ರವನ್ನು ವಿತರಿಸಲು ಕ್ರಮ ವಹಿಸಬೇಕು.  ಡೀಮ್ಡ್ ಫಾರೆಸ್ಟ್ ಇರುವ ಸ್ಥಳದಲ್ಲಿ ಕಂದಾಯ ಹಾಗೂ ಅರಣ್ಯ ಇಲಾಖೆಯವರು ಜಂಟಿ ಸಮೀಕ್ಷೆ ನಡೆಸಿ ಕಂದಾಯ ಭೂಮಿ ಹಸ್ತಾಂತರಿಸಲು ಕ್ರಮವಹಿಸುವಂತೆ ಸೂಚಿಸಿದರು.  ಅಲ್ಲಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಇರುವ ಕೊಳವೆ ಬಾವಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ತಿಳಿಸಿದರು.

ಕೆಲ ದಿನಗಳಿಂದ ಕಾಪು ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಅಪಘಾತ ತಡೆಗೆ ಸರ್ವಿಸ್ ರಸ್ತೆಯಲ್ಲಿ ಸ್ಪೀಡ್ ಬ್ರೆಕರ್ ಅಳವಡಿಸಬೇಕು. ಕಿಂಡಿ ಆಣೆಕಟ್ಟುಗಳ ಸಮರ್ಪಕ ನಿರ್ವಹಣೆ ಬಗ್ಗೆ ಹಾಗೂ ಮುಂಗಾರು ಪ್ರವೇಶಿಸುತ್ತಿರುವುದರಿಂದ ರೈತರಿಗೆ ಬಿತ್ತನೆ ಬೀಜ ಪೂರೈಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಈ ಸಂದರ್ಭದಲ್ಲಿ ಕಾಪು ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಪೂರ್ಣಿಮ ಬಿ.ಸಿ, ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯ ಕುಮಾರ್, ತಹಶೀಲ್ದಾರ್  ಅನಂತ ಶಂಕರ್ ಹಾಗೂ ಕಾಪು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article