-->
ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ, ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಮುನ್ನಡೆ

ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ, ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಮುನ್ನಡೆ


ಕರ್ನಾಟಕದಲ್ಲಿ 2 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮೂರನೇ ಸುತ್ತಿನಲ್ಲಿ 4800 ಮತಗಳ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಹಿನ್ನಡೆ ಅನುಭವಿಸಿದ್ದಾರೆ.

ಬಾಲಕೋಟೆಯಲ್ಲಿ 6ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ - 32,363 ಹಾಗೂ ಬಿಜೆಪಿ - 16,906 ಮತ ಪಡೆದಿದ್ದು, 15,457 ಮತಗಳಿಂದ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

Ads on article

Advertise in articles 1

advertising articles 2

Advertise under the article