ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ
Thursday, May 14, 2026
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ.
ತಿರುವನಂತಪುರದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ, ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ವಿ.ಡಿ. ಸತೀಶನ್ ಹೆಸರನ್ನು ಪ್ರಕಟಿಸಿತು. ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಕೆ.ಸಿ. ವೇಣುಗೋಪಾಲ್ ಹಾಗೂ ರಮೇಶ್ ಚೆನ್ನಿತ್ತಲ ಅವರಂತಹ ಪ್ರಮುಖ ನಾಯಕರ ಹೆಸರುಗಳಿದ್ದವು. ಆದರೆ, ಅಂತಿಮವಾಗಿ ಹೈಕಮಾಂಡ್ ಸತೀಶನ್ ಅವರನ್ನೇ ಆಯ್ಕೆ ಮಾಡಿ ಕೇರಳ ಮುಖ್ಯಮಂತ್ರಿ ಹಗ್ಗ ಜಗ್ಗಾಟಕ್ಕೆ ತೆರೆ ಎಳೆದಿದೆ. 61 ವರ್ಷದ ವಿ.ಡಿ. ಸತೀಶನ್ ಅವರು ವಕೀಲರಾಗಿದ್ದು, ಎರ್ನಾಕುಲಂ ಜಿಲ್ಲೆಯ ಪರವೂರ್ ಕ್ಷೇತ್ರದಿಂದ ಸತತ ಆರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2021 ರಿಂದ 2026 ರವರೆಗೆ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದರು.