-->
ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲು

ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲು


ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ  ನಡೆದಿದೆ.

ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ (15) ಹಾಗೂ ಸುನೀತಾ (21) ಮೃತಪಟ್ಟವರು.  ಸ್ನೇಹಿತರ ತಂಡದೊಂದಿಗೆ ಬಂದಿದ್ದ ಐವರು ವಿದ್ಯಾರ್ಥಿನಿಯರು ಸ್ನಾನಕ್ಕಾಗಿ ನೀರಿಗೆ ಇಳಿದಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ನೀರಿನ ಆಳ ತಿಳಿಯದೆ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದವರು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗದೆ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರ ಸಹಕಾರದಿಂದ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ ಎಂದು ತಿಳಿದುಬಂದಿದೆ.

Ads on article

Advertise in articles 1

advertising articles 2

Advertise under the article