ಉಡುಪಿಯಲ್ಲಿ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ: ಎಂ.ಗಫೂರ್
ಉಡುಪಿಯ ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಶನಿವಾರ ಮಣಿಪಾಲದಲ ಸಿಟಿ ಅರೆನಾ ಮೈದಾನದಲ್ಲಿ ಜರುಗಿತು.
ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ದೀಪ ಬೆಳಗಿಸಿ ಪಂದ್ಯಾಟವನ್ನು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಗಫೂರ್ ಮಾತನಾಡಿ, "ಫುಟ್ಬಾಲ್ ಜಗತ್ತಿನ ಅತ್ಯಂತ ಜನಪ್ರಿಯ ಕ್ರೀಡೆಯಾಗಿದ್ದು, ಮಣಿಪಾಲದಲ್ಲಿ ಈ ಪಂದ್ಯಾಟ ಸಂಘಟಿಸಿ ಫುಟ್ಬಾಲ್ ರಟುಗಳಿಗೆ ಉತ್ತಮ ಅವಕಾಶ ಒದಗಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಹರಿಪ್ರಸಾದ್ ರೈ ಯವರ ಮನವಿಯ ಮೇರೆಗೆ ಉಡುಪಿಯಲ್ಲಿ ಫುಟ್ಬಾಲ್ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಿಸಲಿದ್ದೇವೆ ಎಂದು ಭರವಸೆ ನೀಡಿದರು.
ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಹರಿಪ್ರಸಾದ್ ರೈ ಮಾತನಾಡಿ, "ಜಗತ್ತಿನ 200 ರಾಷ್ಟ್ರಗಳು ಪುಟ್ಬಾಲ್ ನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಈ ಆಟಕ್ಕೆ ಕೋಟ್ಯಾಂತರ ಮಂದಿ ಅಭಿಮಾನಿಗಳಿದ್ದಾರೆ. ಉಡುಪಿ ಜಿಲ್ಲೆ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮನ್ನಣೆ ಪಡೆದ ಹಾಗೆ ಫುಟ್ಬಾಲ್ ಕ್ರೀಡೆಯಲ್ಲೂ ಪ್ರಮುಖವಾಗಿ ಗುರುತಿಸುವಂತಾಗಬೇಕು ಎನ್ನುವ ಉದ್ದೇಶದಿಂದ ಶಿವಾಸ್ ಕಪ್ ಆಯೋಜಿಸಲಾಗಿದೆ ಎಂದರು.
ಈ ಸಂದರ್ಭ ಕ್ರೀಡಾ ಪ್ರೋತ್ಸಾಹಕರಾದ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಸದಾನಂದ್ ಕಾಂಚನ್, ಜಯವೀರ್ ಅವರನ್ನು ಗೌರವಿಸಲಾಯಿತು.
