ಬಿಲ್ಲವ ಮುಖಂಡ ಆನಂದ ಪೂಜಾರಿ ನಿಧನ
Sunday, May 17, 2026
ಬನ್ನಂಜೆಯ ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ, ಕಿದಿಯೂರು ಮೂಲದ ಆನಂದ ಪೂಜಾರಿ ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಭಾನುವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು.
ಬ್ರಹ್ಮಗಿರಿಯ ಆದರ್ಶ ವಿವಿಧೋದ್ದೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದ ಆನಂದ ಪೂಜಾರಿಯವರು ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದರು. ಮೃತರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಸೋಮವಾರ ಸಂಜೆ 4 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.