ಕ್ರಿಕೆಟ್ ಬೆಟ್ಟಿಂಗ್ ಆರೋಪಿಗೆ ಗಡಿಪಾರು ಆದೇಶ
Saturday, May 16, 2026
ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪದಡಿ ಬ್ರಹ್ಮಾವರ ಮೂಲದ ಭರತ್ ಜಯರಾಮ್ ದಾಸ ಎಂಬಾತನಿಗೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರು ಆದೇಶ ಹೊರಡಿಸಿದೆ.
34 ವರ್ಷದ ಭರತ್ ಜಯರಾಮ್ ದಾಸ ವಾರಂಬಳ್ಳಿ ಗ್ರಾಮದ ಮೂಡುಬಿರ್ತಿ ನಿವಾಸಿಯಾಗಿದ್ದು, ಇವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮೇ 14ರಂದು ಆದೇಶ ಜಾರಿಗೊಳಿಸಲಾಗಿದೆ.
ಆರೋಪಿಯ ವಿರುದ್ಧ ಕೋಟ ಪೊಲೀಸ್ ಠಾಣೆ ಹಾಗೂ ಕುಂದಾಪುರ ಪೊಲೀಸ್ ಠಾಣೆ ಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸಿದ ಆರೋಪದಡಿ ಮೂರು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿದ್ದು, ಉಳಿದ ಎರಡು ಪ್ರಕರಣಗಳು ತನಿಖೆಯಲ್ಲಿವೆ ಎಂದು ತಿಳಿದುಬಂದಿದೆ.
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಆರೋಪಿಯನ್ನು ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.