-->
ಕೇಂದ್ರದ ಜನವಿರೋಧಿ ನೀತಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರ ಬಂಧನ

ಕೇಂದ್ರದ ಜನವಿರೋಧಿ ನೀತಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರ ಬಂಧನ


ಉಡುಪಿ ಜಿಲ್ಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.


SIR ಪ್ರಕ್ರಿಯೆ, NEET ಹಗರಣ ಹಾಗೂ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.


ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಆರಂಭವಾದ ಕಾಲ್ನಡಿಗೆ ಮೆರವಣಿಗೆ ಬ್ರಹ್ಮಗಿರಿ ಸರ್ಕಲ್ ಮೂಲಕ ಜೋಡುಕಟ್ಟೆಯವರೆಗೆ ಸಾಗಿತು. ಪ್ರತಿಭಟನೆಯ ವಿಶೇಷ ಆಕರ್ಷಣೆಯಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಸದಸ್ಯರು ಸೈಕಲ್‌ಗಳಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿ ಜನರ ಗಮನ ಸೆಳೆದರು.

ಬಳಿಕ ಜೋಡುಕಟ್ಟೆ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ನೀತಿಗಳಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿ ಕರೆದೊಯ್ದರು. ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. 

Ads on article

Advertise in articles 1

advertising articles 2

Advertise under the article