-->
ಕಾರು- ಬೈಕ್ ನಡುವೆ ಅಪಘಾತ: ಮಹಿಳೆ ಸಾವು

ಕಾರು- ಬೈಕ್ ನಡುವೆ ಅಪಘಾತ: ಮಹಿಳೆ ಸಾವು


ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಭಾನುವಾರ ರಾತ್ರಿ ನಡೆದಿದೆ. 

 ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ‘ಬಳಂಜ ಫಾರ್ಮ್’ ಮಾಲೀಕ ಹಾಗೂ ಪ್ರಗತಿಪರ ಕೃಷಿಕ ಅನಿಲ್ ಭಟ್ (45) ಅವರ ಪತ್ನಿ ಶೈಲಜಾ (35) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಗಂಭೀರವಾಗಿ ಗಾಯಗೊಂಡಿರುವ ಅನಿಲ್ ಭಟ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ರನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. 

ಅನಿಲ್ ಭಟ್ ಮತ್ತು ಪತ್ನಿ ಶೈಲಜಾ ಅವರು ತಮ್ಮ ಫಾರ್ಮ್‌ನ ಕೆಲಸ ಮುಗಿಸಿ, ಮಗನೊಂದಿಗೆ ಬೈಕ್‌ನಲ್ಲಿ ಸೈಟ್ ಕಡೆಗೆ ತೆರಳುತ್ತಿದ್ದರು. ಕನ್ನಡಿಕಟ್ಟೆ ಬಳಿ ತಲುಪುತ್ತಿದ್ದಂತೆ ಇವರ ಬೈಕ್ ಹಾಗೂ ಎದುರಿನಿಂದ ಬಂದ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಶೈಲಜಾ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.









Ads on article

Advertise in articles 1

advertising articles 2

Advertise under the article