ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಎಡಪಕ್ಷಗಳ ಬೆಂಬಲ
Friday, May 08, 2026
ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಎಡಪಕ್ಷಗಳು ಬೆಂಬಲ ಸೂಚಿಸಿದ್ದು, ಟಿವಿಕೆ ಬಹುಮತದ ಮೈತ್ರಿ ಸರ್ಕಾರ ರಚಿಸಲು ಸಿದ್ದವಾಗಿವೆ.
2026ರ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ 108 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಸ್ಪಷ್ಟ ಬಹುಮತಕ್ಕೆ ಬೇಕಾದ 118 ಸ್ಥಾನಗಳಿಗಿಂತ ಕಡಿಮೆ ಸ್ಥಾನಗಳನ್ನು ಪಡೆದಿದೆ.
ಈ ಹಿನ್ನೆಲೆದಲ್ಲಿ ಎಡಪಕ್ಷಗಳು ಹಾಗೂ ಕೆಲವು ಸಣ್ಣ ಪಕ್ಷಗಳ ಬೆಂಬಲದಿಂದ ವಿಜಯ್ ಸರ್ಕಾರ ರಚಿಸುವ ಸಾಧ್ಯತೆಗಳು ಚರ್ಚೆಗೆ ಬಂದಿವೆ. ತಮಿಳುನಾಡಿನ ರಾಜಕೀಯದಲ್ಲಿ ದಶಕಗಳ ಕಾಲ ಪ್ರಭಾವ ಬೀರಿದ್ದ ಡಿಎಂಕೆ–ಎಐಎಡಿಎಂಕೆ ಪ್ರಭುತ್ವಕ್ಕೆ ಟಿವಿಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
234 ಸದಸ್ಯ ಬಲದ ತಮಿಳುನಾಡಿನಲ್ಲಿ 108 ಸ್ಥಾನಗಳಲ್ಲಿ ಜಯ ಗಳಿಸಿದ್ದ ಟಿವಿಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಕಾಂಗ್ರೆಸ್‌ನ ಐವರು ಶಾಸಕರು ಈಗಾಗಲೇ ಬೆಂಬಲ ಘೋಷಿಸಿದ್ದಾರೆ.
ಸಿಪಿಐ, ಸಿಪಿಐ(ಎಂ) ಮತ್ತು ವಿಸಿಕೆ ತಲಾ ಎರಡು ಸ್ಥಾನಗಳನ್ನು ಹೊಂದಿದೆ. ಇದರೊಂದಗೆ ಸಂಖ್ಯಾಬಲವು 119ಕ್ಕೆ ಏರಿಕೆಯಾಗಲಿದೆ. ಬಹುಮತಕ್ಕೆ ಬೇಕಿರುವ ಮ್ಯಾಜಿಕ್ ಸಂಖ್ಯೆ 118 ಆಗಿದೆ.