ಮೋದಿ ಪ್ರಧಾನಿಯಾಗಿ 12 ವರ್ಷ: ಕುಂದೇಶ್ವರ ದೇಗುಲದಲ್ಲಿ ಬಿಜೆಪಿಯಿಂದ ವಿಶೇಷ ಪೂಜೆ
Wednesday, June 10, 2026
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ದೇಶ ಸೇವೆಯಲ್ಲಿ 12 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಕುಂದಾಪುರ ಮಂಡಲದ ವತಿಯಿಂದ ಕುಂದಾಪುರದ ಶ್ರೀ ಕುಂದೇಶ್ವರ ದೇಗುಲದಲ್ಲಿ ಬುಧವಾರ ವಿಶೇಷ ಸಾಮೂಹಿಕ ಪೂಜೆ ಸಲ್ಲಿಸಲಾಯಿತು.
ಪ್ರಧಾನಿ ಮೋದಿ ಅವರ 4,399 ದಿನಗಳ ನಾಯಕತ್ವ ಮತ್ತು ದೇಶಸೇವೆಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಈ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭಾಗವಹಿಸಿ ಮಾತನಾಡಿ, ಮೋದಿಜಿ ಅವರ ನಾಯಕತ್ವದಲ್ಲಿ ಭಾರತ ವಿಶ್ವಗುರುವಾಗುವತ್ತ ದಾಪುಗಾಲು ಹಾಕುತ್ತಿದೆ. ವಿಶ್ವಾಸ, ಅಭಿವೃದ್ಧಿ ಹಾಗೂ ಜನಕಲ್ಯಾಣದ ದೃಷ್ಟಿಯಿಂದ ಅವರು ದೇಶಕ್ಕೆ ಹೊಸ ದಿಕ್ಕು ತೋರಿಸಿದ್ದಾರೆ. ಬಡವರ ಕಲ್ಯಾಣ ಮತ್ತು ಅವರ ಸೇವಾ ಮನೋಭಾವಕ್ಕೆ ಶ್ರೀ ಕುಂದೇಶ್ವರನ ಆಶೀರ್ವಾದ ಸದಾ ಇರಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ಹೇಳಿದರು.
ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ, “ಮೋದಿಯವರ 12 ವರ್ಷಗಳ ಆಡಳಿತ ದೇಶಕ್ಕೆ ದಿಕ್ಸೂಚಿಯಾಗಿದೆ. 2047ರ ವಿಕಸಿತ ಭಾರತದ ನಿರ್ಮಾಣದ ಸಂಕಲ್ಪವನ್ನು ಸಾಕಾರಗೊಳಿಸಲು ಅವರ ಕೈ ಮತ್ತಷ್ಟು ಬಲಪಡಿಸುವ ಶಕ್ತಿ ದೊರಕಲಿ ಎಂಬ ಆಶಯದೊಂದಿಗೆ ಇಂದು ವಿಶೇಷ ಸಾಮೂಹಿಕ ಪೂಜೆ ಸಲ್ಲಿಸಲಾಗಿದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್., ಉಪಾಧ್ಯಕ್ಷರಾದ ಪ್ರಕಾಶ್ ಜಿ. ಪೂಜಾರಿ, ರೂಪ ಬಾಬು ಪೈ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ ಯು. ಪ್ರಮುಖರಾದ ಸಂಪತ್ ಕುಮಾರ್ ಶೆಟ್ಟಿ ಶಾನಾಡಿ, ರಾಜೇಶ್ ಕಾವೇರಿ ಕುಂದಾಪುರ, ದಿವಾಕರ್ ಕಡ್ಗಿ, ಸತೀಶ್ ಶೆಟ್ಟಿ ಸೇರಿದಂತೆ ವಿವಿಧ ಮೋರ್ಚಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮಂಡಲದ ಪದಾಧಿಕಾರಿಗಳು ಮತ್ತು ಪುರಸಭಾ ಮಾಜಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

