-->
ಉಡುಪಿ ಜಿಲ್ಲೆಯಲ್ಲಿ ವಶಪಡಿಸಿಕೊಂಡ ₹36.29 ಲಕ್ಷ ಮೌಲ್ಯದ 73 ಕೆಜಿ ಗಾಂಜಾ ನಾಶ

ಉಡುಪಿ ಜಿಲ್ಲೆಯಲ್ಲಿ ವಶಪಡಿಸಿಕೊಂಡ ₹36.29 ಲಕ್ಷ ಮೌಲ್ಯದ 73 ಕೆಜಿ ಗಾಂಜಾ ನಾಶ


ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಸುಮಾರು 73 ಕೆಜಿ 92 ಗ್ರಾಂ 828 ಮಿಲಿಗ್ರಾಂ ತೂಕದ, ಅಂದಾಜು 36,29,550 ರೂ. ಮೌಲ್ಯದ ಗಾಂಜಾವನ್ನು ಕಾನೂನು ಪ್ರಕ್ರಿಯೆಯಂತೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಮೆ. ಆಯುಷ್ ಎನ್‌ವಿರೋಟೆಕ್ ಪ್ರೈ.ಲಿ. ಸಂಸ್ಥೆಯಲ್ಲಿ ನಾಶಪಡಿಸಲಾಯಿತು.


ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿಯ ಮೇಲ್ವಿಚಾರಣೆಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿಯ ಅಧ್ಯಕ್ಷ ಹರಿರಾಮ್ ಶಂಕರ್ ನೇತೃತ್ವ ವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿಯ ಸದಸ್ಯರು ಹಾಗೂ ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್. ವಿಜಯಪ್ರಸಾದ್, ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು., ಇತರ ಪೊಲೀಸ್ ಅಧಿಕಾರಿಗಳು ಹಾಗೂ ಮೆ. ಆಯುಷ್ ಎನ್‌ವಿರೋಟೆಕ್ ಪ್ರೈ.ಲಿ. ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article