-->
 ಗಾಂಜಾ ಮಾರಾಟ: ಆರೋಪಿಯ ಬಂಧನ, 4 ಕೆ.ಜಿ. ಗಾಂಜಾ ವಶ

ಗಾಂಜಾ ಮಾರಾಟ: ಆರೋಪಿಯ ಬಂಧನ, 4 ಕೆ.ಜಿ. ಗಾಂಜಾ ವಶ


ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಸುಮಾರು 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಕೋಟೆಕಾರ್ ಗ್ರಾಮದ ಮುಳ್ಳುಗುಡ್ಡೆ ನಿವಾಸಿ ಅಬ್ಬಾಸ್ (50) ಎಂದು ಗುರುತಿಸಲಾಗಿದೆ.  

ಜೂನ್ 25ರಂದು ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಮುಲ್ಕಿ ಪೊಲೀಸರು, ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನ ಬಳಿ ಇದ್ದ ಸುಮಾರು 4 ಕೆ.ಜಿ. ಗಾಂಜಾವನ್ನು ಜಪ್ತಿ ಮಾಡಲಾಗಿದ್ದು, ಇದರ ಅಂದಾಜು ಮೌಲ್ಯ ಸುಮಾರು 2 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಈಗಾಗಲೇ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರಕರಣಗಳಿವೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article