ಇಂದಿನಿಂದ ಮೂರು ದಿನ ಕರಾವಳಿಯಲ್ಲಿ ರೆಡ್ ಅಲರ್ಟ್!
Monday, June 08, 2026
ಸೋಮವಾರದಂದು (ಇಂದು) ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 60ರಿಂದ 80 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಹಾಗೂ ಹಲವೆಡೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಮಂಗಳವಾರದಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸಹಿತ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಜಾರಿಯಲ್ಲಿರಲಿದೆ.
ಬುಧವಾರದಂದು ಏಳು ಜಿಲ್ಲೆಗಳಲ್ಲಿ — ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ — ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.