-->
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಪಕ್ಷದ ಐವರು ಅಭ್ಯರ್ಥಿಗಳ ಗೆಲುವು

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಪಕ್ಷದ ಐವರು ಅಭ್ಯರ್ಥಿಗಳ ಗೆಲುವು



ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ತಾನು ಸ್ಪರ್ಧಿಸಿದ ಎಲ್ಲಾ 5 ಸ್ಥಾನಗಳಲ್ಲಿ ಜಯಗಳಿಸಿದೆ. ಬಿಜೆಪಿ 2 ಸ್ಥಾನಗಳಲ್ಲಿ ಜಯಗಳಿಸಿವೆ. ಜೆಡಿಎಸ್‌ ಅಭ್ಯರ್ಥಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ ತನ್ನ ಸಾಮರ್ಥ್ಯಕ್ಕೂ ಒಂದು ಹೆಚ್ಚುವರಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಗೆಲುವು ಸಾಧಿಸಲು ಪ್ರತಿಯೊಬ್ಬ ಅಭ್ಯರ್ಥಿಗೆ 28 ಮತಗಳ ಅಗತ್ಯವಿದ್ದು, ಕಾಂಗ್ರೆಸ್ ಪಕ್ಷದ ಬಿ.ಕೆ. ಹರಿಪ್ರಸಾದ್,  ಮಂಗಳೂರಿನ ಪಿ. ಮೋಹನ್, ತಿಪ್ಪಣ್ಣಪ್ಪ ಕಾಮಕನೂರ, ವಿನಯ್ ಕಾರ್ತಿಕ್, ಶಿವಣ್ಣ ಮಳವಳ್ಳಿ, ಆಯ್ಕೆಯಾದರೆ, ಬಿಜೆಪಿಯಿಂದ 
ರಘು ಕೌಟಿಲ್ಯ ಹಾಗೂ ಲಿಂಗರಾಜು ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಅಭ್ಯರ್ಥಿಗೇ ಕಡಿಮೆ ಮತ ಬಿದ್ದಿರುವ ಕಾರಣ ಬಿಜೆಪಿಯ ಮತದಾರನೇ ಅಡ್ಡಮತದಾನ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. 

Ads on article

Advertise in articles 1

advertising articles 2

Advertise under the article